ದನವನ್ನು ಹಿಂಸಾತ್ಮಕವಾಗಿ ಕಾರಿಗೆ ತುಂಬಿಸಿ ಪರಾರಿ: ಪ್ರಮುಖ ಆರೋಪಿ ಅರೆಸ್ಟ್!

ಕುಂದಾಪುರ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ನಕ್ಷೆಗಳನ್ನುನೋಡಿ

ಸೆ.29ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬಂದಿದ್ದ ಅಪರಿಚಿತರು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನೊಳಗೆ ತುಂಬಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು.

ಘಟನೆಯ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರ ಮಾಹಿತಿಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದರು.

ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನು ಪತ್ತೆಹಚ್ಚಿದ ಪೊಲೀಸರು, ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದಮನೆಯ ನಿವಾಸಿ ಮೊಹಮ್ಮದ್ ಸಿನಾನ್ (20) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Star Of Kudla

Learn More →

Leave a Reply

Your email address will not be published. Required fields are marked *