ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ರಾಯಚೂರು: ಮಹಾಲಯ ಅಮಾವಾಸ್ಯೆಯ ದಿನದಂದು ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು.

ಸೌಲಭ್ಯಗಳ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರಿಗೆ ಈ ಗೊಂಬೆ ಮೊದಲಿಗೆ ಕಂಡಿದ್ದು, ನಂತರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ತಕ್ಷಣವೇ ಸಿಬ್ಬಂದಿ ಈ ಗೊಂಬೆಯನ್ನು ಸುಟ್ಟು ಹಾಕಿದ್ದಾರೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ

Star Of Kudla

Learn More →

Leave a Reply

Your email address will not be published. Required fields are marked *