ಮಂಗಳೂರು: ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಭೀಕರ ಅಪಘಾತ!!ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ದುರ್ಮರಣ

ಮಂಗಳೂರು: ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾರುಣ ಘಟನೆಯ ಸಂಪೂರ್ಣ ದೃಶ್ಯವು ಪೆಟ್ರೋಲ್ ಬಂಕ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಮಹೀಂದ್ರಾ ಪಿಕಪ್ ವಾಹನವು ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ವಿದ್ಯುತ್ ಕಂಬವೇ ತುಂಡಾಗಿ ನೆಲಕ್ಕುರುಳಿದೆ. ಅಪಘಾತದ ತೀವ್ರತೆಗೆ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತಪಟ್ಟವರನ್ನು ಮೊಹಮ್ಮದ್ ಅಶ್ಫಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಮಂಜನಾಡಿ ಮೂಲದವರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *