ಮಂಗಳೂರು: ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆ- 7 ಮಂದಿ ವಶಕ್ಕೆ, ₹4.50 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳ ಜಪ್ತಿ..!

ಮಂಗಳೂರು: ನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಮೂವರು ಬಾಲಕರು ಸೇರಿ ಒಟ್ಟು 7 ಆರೋಪಿಗಳನ್ನು ವಶಕ್ಕೆ ಪಡೆದು 9 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೆಲೆನ್ಸಿಯಾ ಜಂಕ್ಷನ್, ಜಪ್ಪು ಮಾರ್ಕೆಟ್, ಅತ್ತಾವರ ಕೆಎಂಸಿ ಆಸ್ಪತ್ರೆ ಬಳಿ ಮತ್ತು ಹೊಯಿಗೆ ಬಜಾರ್, ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ, ಕುತಾರ್ ಪಂಡಿತ್ ಹೌಸ್ ಬಳಿ ಅ.12 ರಿಂದ ಅ.22 ರ ಅವಧಿಯಲ್ಲಿ 6 ಬೈಕ್‌ಗಳು ಕಳವಾಗಿದ್ದವು. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ 4 ಮತ್ತು ಉಳ್ಳಾಲ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ನೇತೃತ್ವದ ವಿಶೇಷ ತಂಡ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ.

ಬಂಧಿತರನ್ನು ಮಹಮ್ಮದ್ ಸಿಯಾಮ್ (19) – ಮೂಡುಶೆಡ್ಡೆ, ಮುಹಮ್ಮದ್ ನಾಸೀಫ್ @ ನಸೀಫ್ (19) – ಜೋಕಟ್ಟೆ, ಮೊಹಮ್ಮದ್ ರಾಹೀಲ್ (18) – ಮೂಡುಶೆಡ್ಡೆ, ನಿಖಿಲ್ (18) – ಸದಾಶಿವ ನಗರ, ಎಂದು ಗುರುತಿಸಲಾಗಿದೆ.

ಇವರಲ್ಲಿ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದು, ಉಳಿದ 04 ಜನ ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ 6 ಬೈಕ್ ಮತ್ತು ಕೃತ್ಯಕ್ಕೆ ಬಳಸಿದ 3 ಬೈಕ್ ಸೇರಿ 9 ಬೈಕ್ ವಶಪಡಿಸಿಕೊಳ್ಳಲಾಗಿದ್ದು ಅವುಗಳ ಒಟ್ಟು ಮೌಲ್ಯ 4,50,000/- ರೂ ಎಂದು ಅಂದಾಜಿಸಲಾಗಿದೆ.

ಐಷಾರಾಮಿ ಜೀವನಕ್ಕಾಗಿ ದುಬಾರಿ ಬೈಕ್‌ಗಳನ್ನು ಗುರಿಯಾಗಿಸಿ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆಯಲ್ಲಿ ಬಹಿರಂಗವಾಗಿದೆ. ಬಂಧಿತ 4 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ರಾಘವೇಂದ್ರ ಬೈಂದೂರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಮಾರುತಿ ಹಾಗೂ ಕ್ರೈಂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ, ಆಂಜನೇಯ ಕೆ.ಎಸ್, ರವರು ಭಾಗವಹಿಸಿದ್ದು, ಮಂಗಳೂರು ದಕ್ಷಿಣ ಠಾಣಾ ಅಧಿಕಾರಿ ಸಿಬ್ಬಂದಿಯವರು ಪತ್ತೆ ಕಾರ್ಯಕ್ಕೆ ಸಹಕರಿಸುತ್ತಾರೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *