ಭೀಕರ ರಸ್ತೆ ಅಪಘಾತ: RSS ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು-ಕಾರು ಚಾಲಕ ಗಂಭೀರ

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ, ಸ್ಥಳೀಯ RSS ಮುಖಂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಮೃತಪಟ್ಟವರು. ಕೋಟೇಶ್ವರದ ಬೀಜಾಡಿ

ನಿವಾಸಿ ಪ್ರದೀಪ್ ಕಾಂಚನ್ ಗಂಭೀರ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಬಳಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಧಾವಿಸಿ ಬಂದ ಕಾರು ಸೈಕಲ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭರಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇತ್ತ ಸೈಕಲ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *