ಕಾಂಗ್ರೆಸ್ ಕಾರ್ಯಕರ್ತನನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ನೋಡಿದ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆಯ ಸುದ್ದಿ ತಿಳಿದ ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯಾವ ಕಾರಣಕ್ಕಾಗಿ ನಡೆದಿರಬಹುದು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಜಾಲ ಬೀಸಿರುವ ಮುಂಡರಗಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!