ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್‌

ಕೆಲಸದ ಆಮಿಷ ನೀಡಿದ ಯುವತಿಯೋರ್ವಳನ್ನು ಆಕೆಯನ್ನು ಕರೆಸಿ, ಅತ್ಯಾಚಾರ ಮಾಡಿದ ಘಟನೆಯೊಂದು ಬನ್ನೂರು ಗ್ರಾಮದ ಬೈಲು ಎಂಬಲ್ಲಿರುವ ಬಾಡಿಗೆ ಮನೆಯಲ್ಲಿ ನಡೆದಿದೆ

ಯುವತಿ ದೂರು ನೀಡಿದ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾನೆ. ಈ ಘಟನೆ ಮಾ.13 ರಂದು ನಡೆದಿದೆ ಎಂದು ವರದಿಯಾಗಿದೆ. ವಾಮಂಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಇನ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕ ಉಂಟಾಗಿದೆ. ಆಕೆಯ ಕೋರಿಕೆಯ ಮೇರೆಗೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗಕ್ಕೆಂದು ತನ್ನ ಸ್ನೇಹಿತರಲ್ಲಿ ತಿಳಿಸಿದ್ದ ಎನ್ನಲಾಗಿದೆ.

ಯುವಕನ ಸ್ನೇಹಿತರಾದ ಕರ್ವೇಲು ಮತ್ತು ಕಡೇಶಿವಾಲಯದ ಇಬ್ಬರು ಇದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.

ವಾಮಂಜೂರಿನ ಆತನ ಸ್ನೆಹಿತೆಯ ನಂಬ್ಬರ್‌ ಪಡೆದು ಆಕೆಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಪುತ್ತೂರಿಗೆ ಕರೆಸಿದ್ದು, ಯುವತಿ ತನ್ನ ಸ್ನೇಹಿತೆಯ ಜೊತೆ ಮಾ.13 ರಂದು ಪುತ್ತೂರಿಗೆ ಬಂದಾಗ ಆಪಾದಿತ ಯುವಕರಿಬ್ಬರು ಆಕೆಗೆ ಪ್ರೊಫೈಲ್‌ ಬರೆಯಲೆಂದು ಹೇಳಿ ಆಕೆಯನ್ನು ಬನ್ನೂರು ಗ್ರಾಮದ ಬನ್ನೂರು ಬೈಲು ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದು ಕೊಂಡು ಹೋಗಿದ್ದಾರೆ.

ಅಲ್ಲಿ ಅವರು ಒಬ್ಬಾಕೆಯನ್ನು ಹೊರಗೆ ಕುಳ್ಳಿರಿಸಿ, ಇನ್ನೋರ್ವಾಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಯ ನಂತರ ಯುವಕರಿಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆ ಯುವತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನಂತರ ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ದೂರು ಸ್ವೀಕರಿಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!