ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ.

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ

ಡಿಜಿಟಲ್‌ ದಾಖಲಾತಿ ಕೆವೈಸಿ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ.

ಆದರೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರೀಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ ವಿಸ್ತರಿಸಿತ್ತು. ಪೇಟಿಎಂ ಬಳಕೆದಾರರು ಕಳುಹಿಸುವ ಹಣದ ವ್ಯವಹಾರ ಯೆಸ್ ಬ್ಯಾಂಕ್ ಮೂಲಕ ನಡೆಯುತ್ತದೆ. ಹೀಗಾಗಿ ಪೇಟಿಎಂ ಸೇವೆ ಮುಂದುವರೆಯುತ್ತದೆ.

ಇದುವರೆಗೆ ಪೇಟಿಎಂ ಆ್ಯಪ್ ಸೇವೆ ನಿರ್ಬಂಧಕ್ಕೆ ಒಳಗಾದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೂಲಕ ನಡೆಯುತ್ತಿತ್ತು. ಈಗ ಯೆಸ್ ಬ್ಯಾಂಕ್ ಮೂಲಕ ನಡೆಯಲಿದ್ದು, ಪೇಟಿಎಂ ಯುಪಿಐ ಸೇವೆ ಮುಂದುವರೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇತರ ಮೂರು ಬ್ಯಾಂಕ್ ಗಳ ಮೂಲಕ ಯುಪಿಐ ಅನ್ನು ಮುಂದುವರಿಸಲು ಪೇಟಿಎಂ ಅನುಮೋದನೆ ಪಡೆದಿದೆ.

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮಾ.14ರಂದು One97 ಕಮ್ಯುನಿಕೇಷನ್ಸ್ ಬ್ರ್ಯಾಂಡ್ ಪೇಟಿಎಂ ಅನ್ನು ನಿರ್ವಹಿಸುತ್ತದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ನಲ್ಲಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್ ಪೂರೈಕೆದಾರರಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!