ಕಾರು ಡಿವೈಡರ್‌ಗೆ ಢಿಕ್ಕಿ; ಚಾಲಕ ಅಪಾಯದಿಂದ ಪಾರು

ಕಾರು ಡಿವೈಡರ್‌ಗೆ ಢಿಕ್ಕಿ; ಚಾಲಕ ಅಪಾಯದಿಂದ ಪಾರು

ಮೂಲ್ಕಿ: ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂ ಗೊಂಡ ಘಟನೆ ಸಂಭವಿಸಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ಕಾರನ್ನು ಚಲಾಯಿಸುತ್ತಿದ್ದ ಮಂಗಳೂರಿನ ಪ್ರಶಾಂತ್‌ ಎಂಬವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿರಂತರ ಅಪಘಾತ ಇಲ್ಲಿ ಇತ್ತೀಚೆಗೆ ಹಲವು ಅಫಘಾತಗಳು ನಡೆದಿದ್ದು, ಸಾವು ನೋವು ಉಂಟಾಗಿದೆ. ಇಲ್ಲಿಯ ಪೆಟ್ರೋಲ್‌ ಬಂಕ್‌ ಬಳಿ ಪಡುಪಣಂಬೂರು ಅರಮನೆ ರಸ್ತೆ ಕಡೆಯಿಂದ ಬರುವ ಹಾಗೂ ತೋಕೂರು ರಸ್ತೆಗೆ ಹೋಗುವ ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳು ವಿರುದ್ಧ ದಿಕ್ಕಿನಲ್ಲಿ ನಿರಂತರವಾಗಿ ಸಾಗುತ್ತಿವೆ. ಈ ಸ್ಥಳದಲ್ಲಿಯೂ ಅಪಘಾತಗಳು ನಿತ್ಯ ಎಂಬಂತೆ ನಡೆಯುತ್ತಿವೆ. ಇದಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕೇಂದು ಸ್ಥಳೀಯರು ಆಗ್ರಹಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!