
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.
ಆರೋಪಿಗಳನ್ನು ದೇರಳ ಕಟ್ಟೆ ಬೆಳ್ಮಾ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್, ಅದೇ ಗ್ರಾಮದ ತಿಲಕ ನಗರ ನಿವಾಸಿ ಮೊಹಮ್ಮದ್ ಅಲ್ಫಾಜ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸ್ವತ್ತುಗಳ ಒಟ್ಟು ಮೌಲ್ಯ 10,300 ರೂಪಾಯಿ ಆಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಅಶ್ರಫ್ ಮೇಲೆ ಕೊಣಜೆ ಪೊಲೀಸ್ ಠಾಣೆಯಲ್ಲಿ ವಾರಂಟ್ ಜಾರಿಯಲ್ಲಿದೆ. ಈತ ಸುಮಾರು ಆರು ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಎನ್ನಲಾಗಿದೆ.


