ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮೊಹಮ್ಮದ್ ಜಬೀರ್‌ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್‌ ಜಬೀರ್‌ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ನಿವಾಸಿಯಾದ 35 ವರ್ಷದ ಜಬೀರ್‌ ಅವರು ತಮ್ಮ ಕಸ್ಟಡಿ ವಿಸ್ತರಣೆ ಮಾಡಿ ಡಿಫಾಲ್ಟ್‌ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯವು 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಜಾ ಮಾಡಿದೆ.
ಅರ್ಜಿದಾರ/ ಆರೋಪಿಯ ಪರ ವಕೀಲೆ ಹಲೀಮಾ ಅಮೀನ್‌ ಅವರು ಎನ್‌ಐಎ ಪರವಾಗಿ ಹಾಜರಾಗಿ ಅರ್ಜಿದಾರರ ಕಸ್ಟಡಿ ಆದೇಶ ವಿಸ್ತರಿಸುವಂತೆ ಕೋರಿರುವವರು ವಿಶೇಷ ಸರ್ಕಾರಿ ಅಭಿಯೋಜಕರಲ್ಲ. ಅಲ್ಲದೇ, ಅವರ ಮೌಖಿಕ ಕೋರಿಕೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಪರಿಗಣಿಸಬಾರದಿತ್ತು ಎಂದಿದ್ದಾರೆ. ಅಮೀನ್‌ ಅವರ ವಾದವು ತಥಾಕಥಿತ ಮತ್ತು ತಾಂತ್ರಿಕವಾಗಿದೆ; ಅಮೀನ್‌ ಅವರ ವಾದ ಒಪ್ಪಿದರೆ ವಕೀಲರ ಜೂನಿಯರ್‌ ಅಥವಾ ಸಹೋದ್ಯೋಗಿ ಅವರ ಪರವಾಗಿ ಹಾಜರಾಗುವಂತಿಲ್ಲ” ಎಂದು ಆದೇಶದಲ್ಲಿ ಹೇಳಿದೆ.

ವಿಶೇಷ ಸರ್ಕಾರಿ ಅಭಿಯೋಜಕರ ಕಿರಿಯ ಸಹೋದ್ಯೋಗಿ ಹಾಜರಾಗಿ ತನಿಖಾಧಿಕಾರಿಯು ಆರೋಪಪಟ್ಟಿ ಸಲ್ಲಿಸಿಲ್ಲ. ಈ ಸಂಬಂಧ ಸೂಕ್ತ ಅರ್ಜಿ ಸಲ್ಲಿಸಲಾಗುವುದು. ಈ ಹಿನ್ನೆಲೆಯಲ್ಲಿ ಆರೋಪಿ ಜಬೀರ್‌ ಅವರ ಕಸ್ಟಡಿ ವಿಸ್ತರಿಸುವಂತೆ ಮೌಖಿಕವಾಗಿ ಕೋರಿದ್ದಾರೆ. ಅದರಂತೆ 2023ರ ಫೆಬ್ರವರಿ 8ರಂದು ಪ್ರಕರಣದ ವಿಚಾರಣೆ ನಡೆಸಲಾಗಿದೆ. ಹೀಗಾಗಿ, 2023ರ ಫೆಬ್ರವರಿ 7ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಕಸ್ಟಡಿ ವಿಸ್ತರಣೆ ಕೋರಲು ಆ ವಕೀಲರಿಗೆ ಅವಕಾಶವಿಲ್ಲ ಎಂದು ಹೇಳಲಾಗದು ಎಂದು ನ್ಯಾಯಾಲಯವು ಹೇಳಿದೆ.

ಕಸ್ಟಡಿ ವಿಸ್ತರಣೆ ಕೋರಿ ಎನ್‌ಐಎ ಮತ್ತು ಡಿಫಾಲ್ಟ್‌ ಜಾಮೀನು ಕೋರಿ ಅರ್ಜಿದಾರರು ಒಂದೇ ದಿನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಎರಡೂ ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಒಂದೇ ದಿನ ವಿಚಾರಣೆ ನಡೆಸಿದೆ. ಅರ್ಜಿದಾರರ ಕಸ್ಟಡಿ ವಿಸ್ತರಣೆ ಕೋರಿ ನಿರ್ದಿಷ್ಟ ಕಾರಣಗಳನ್ನು ಒಳಗೊಂಡ ಮನವಿಯನ್ನು ಎನ್‌ಐಎ ಸಲ್ಲಿಸಿದೆ. ಎನ್‌ಐಎ ಅರ್ಜಿಯನ್ನು ಪುರಸ್ಕರಿಸಿರುವುದರಿಂದ ಡೀಫಾಲ್ಟ್‌ ಜಾಮೀನು ಕೋರಿರುವ ಅರ್ಜಿದಾರರ ಕೋರಿಕೆಯನ್ನು ತಿರಸ್ಕರಿಸಲಾಗಿದೆ. ಅರ್ಜಿದಾರರ ಕಸ್ಟಡಿ ಪಡೆಯಲು ಸೂಕ್ತ ಮತ್ತು ನಿರ್ದಿಷ್ಟ ಕಾರಣ ನೀಡಲಾಗಿಲ್ಲ ಎಂದು ಅರ್ಜಿದಾರರು ಕೋರದೇ ಇರುವುದರಿಂದ ಅದನ್ನು ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ. ಎನ್‌ಐಎ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ವಾದಿಸಿದ್ದರು.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿ ಜಬೀರ್‌ ಅವರು 21ನೇ ಆರೋಪಿಯಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್‌ 302, ಶಸ್ತ್ರಾಸ್ತ್ರ ಕಾಯಿದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಸೆಕ್ಷನ್‌ಗಳಾದ 16, 18, 19 ಮತ್ತು 20ರ ಅಡಿ ಪ್ರಕರಣ ದಾಖಲಿಸಲಾಗಿದೆ. 07.11.2022ರಂದು ಜಬೀರ್‌ ಬಂಧನವಾಗಿದ್ದು, 08.11.2022ರಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!