ಮಾಧ್ಯಮಗಳ ಜೊತೆ ಮಾತನಾಡಿದ್ದ ಸದಾನಂದ ಗೌಡ ಕಾಂಗ್ರೆಸ್‌ ನಾಯಕರು (Congress) ನನ್ನನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.

ಬೆಂಗಳೂರು : ಸಂಸದ ಡಿವಿ ಸದಾನಂದ ಗೌಡರ (DV Sadananda Gowda) ನಡೆ ಇನ್ನೂ ನಿಗೂಢವಾಗಿದ್ದು ಬೆಂಗಳೂರಿನಿಂದ ಸುಳ್ಯಕ್ಕೆ (Sullia) ಪ್ರಯಾಣಿಸಿದ್ದಾರೆ.ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸದಾನಂದ ಗೌಡ ಇಂದು ಬೆಳಗ್ಗೆಯೇ ಸುಳ್ಯದತ್ತ ಪ್ರಯಾಣಿಸಿದ್ದು ಕುಟುಂಬಸ್ಥರು, ಸಂಬಂಧಿಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.ಮಾರ್ಚ್‌ 18 ರಂದು ಹುಟ್ಟುಹಬ್ಬ ಆಚರಿಸಿದ್ದ ವೇಳೆ ನಾನು ನಾಳೆ ಸುದ್ದಿಗೋಷ್ಠಿ ನಡೆಸಿ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ ಎಂದು ತಿಳಿಸಿದ್ದರು. ಆದರೆ ಅವರು ಸುದ್ದಿಗೋಷ್ಠಿ ನಡೆಸಿರಲಿಲ್ಲ. ‌ ಹೀಗಾಗಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿತ್ತು.

ಸದಾನಂದ ಗೌಡ ಗುರುವಾರ ಬೆಂಗಳೂರಿಗೆ (Bengaluru) ವಾಪಸ್‌ ಆಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ಬಂದ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ

ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಕೈ ತಪ್ಪಿದರಿಂದ ಅಸಮಾಧಾನಗೊಂಡಿರುವ ಡಿವಿಎಸ್‌ ಮೈಸೂರಿನಿಂದ (Mysuru) ಕಾಂಗ್ರೆಸ್‌ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಯಾರೂ ಈ ವಿಚಾರವನ್ನು ಅಧಿಕೃತಗೊಳಿಸಿಲ್ಲ.

ಮಾಧ್ಯಮಗಳ ಜೊತೆ ಮಾತನಾಡಿದ್ದ ಸದಾನಂದ ಗೌಡ ಕಾಂಗ್ರೆಸ್‌ ನಾಯಕರು (Congress) ನನ್ನನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?