ಹಿಂದೂ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ 9 ಜನರ ಗುಂಪು ತೀವ್ರವಾಗಿ ಹಲ್ಲೆ ಮಾಡುವ ಮೂಲಕ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ.

ಮಲ್ಲು, ತಾಯಪ್ಪ, ಶಿವುನಾಯಕ, ರೂಪೇಶ ಕೋಳಿವಾಡ, ಅಂಬ್ರೇಶ, ಆದರ್ಶಗೌಡ, ಪವನಕುಮಾರ, ಜಂಬು ಸೋಲಂಕಿ, ಬಾಪು ಸೋಲಂಕಿ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.

ನಗರದಲ್ಲಿ ಮಾರ್ಚ್‌ 18ರಂದು ಕಾಲೇಜಿನಿಂದ ಮನೆಗೆ ಬರುವಾಗ ಯುವಕನನ್ನು ಅಪಹರಿಸಿದ ಒಂಬತ್ತು ಜನರಿದ್ದ ಗುಂಪು ನಂತರ ಕೊಠಡಿಯಲ್ಲಿ ಕೂಡಿ ಹಾಕಿ ಬೆನ್ನಿಗೆ ಬಾಸುಂಡೆ ಬರುವ ಹಾಗೆ ಥಳಿಸಿದೆ. ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದೆ. ತಪ್ಪಾಗಿದೆ ಎಂದು ಕಾಲಿಗೆ ಬಿದ್ದು ಯುವಕ ಜೀವ ಉಳಿಸಿಕೊಂಡು ಬಂದಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವತಿಗೆ ಹಾಗೂ ಹಲ್ಲೆ ನಡೆಸಿದ ಗುಂಪಿನವರಿಗೆ ಯಾವುದೇ ಸಂಬಂಧವಿಲ್ಲ. ಯುವತಿಯನ್ನು ಪ್ರೀತಿಸಿದವನು ಅನ್ಯ ಕೋಮಿನವನು ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಯಾದಗಿರಿ ನಗರ ಠಾಣೆಯಲ್ಲಿ 9 ಜನರ ವಿರುದ್ಧ ಐಪಿಸಿಯ 143, 147, 148, 307, 323, 341, 342, 363, 504 ಹಾಗೂ 506 ಕಲಂ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?