ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುಬೆಟ್ಟು ಗ್ರಾಮದ ಬೋಳ್ಮಿ ನಾರು ಎಂಬಲ್ಲಿ ನಡೆದಿದೆ.

ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುಬೆಟ್ಟು ಗ್ರಾಮದ ಬೋಳ್ಮಿ ನಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು.
ತಳದಲ್ಲಿ ಮಧ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.
ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?