
ಮಂಗಳೂರು: ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.
ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತರೂ ಆಗಿರುವ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ


