ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ವಶಕ್ಕೆ

ಮಂಗಳೂರು, ಮಾ.22:  ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಲೊರೊಟ್ಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36)ಬಂಧಿತ ಆರೋಪಿ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,40,500 ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್‌ಸುಂದರ್, ಎಸ್ಸೈಗಳಾದ ಶರಣಪ್ಪ ಭಂಡಾರಿ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?