ಮೇಕೆದಾಟು ವಿಚಾರದಲ್ಲಿ ದೇವೇಗೌಡರ ನಿಲುವನ್ನು ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆಯನ್ನು ಡಿ ಕೆ ಶಿವಕುಮಾ‌ರ್ ಸ್ವಾಗತಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ “ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ಮಾಜಿ ಪ್ರಧಾನಿ ಶ್ರೀ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ .

ಈಗ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನಾದರೂ ಮನಗಂಡು ಕೇಂದ್ರ ಸರಕಾರ ಮೇಕೆದಾಟು ಆಣೆಕಟ್ಟು ಯೋಜನೆಗೆ ಅನುಮತಿ ನೀಡುತ್ತದೆ ಎಂಬ ವಿಶ್ವಾಸ ನನ್ನದು. ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್‌ ಪಕ್ಷವು “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕಿ ಕುಳಿತಿದೆ. ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ INDIA ಒಕ್ಕೂಟ ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಸ್ಟಾಲಿನ್ ನೀಡಿದ ಈ ಹೇಳಿಕೆ INDIA ಒಕ್ಕೂಟದ ಮುಖ್ಯ ಪಕ್ಷವಾಗಿರುವ ಕಾಂಗ್ರೆಸ್’ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?