ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ನಾಪತ್ತೆ

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ನಾಪತ್ತೆ
 

ಬಂಟ್ವಾಳ,: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ‌ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ , ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದ ಅಧಿಕಾರಿಯಾಗಿದ್ದಾರೆ.ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದವರು ಪೋನ್ ಸ್ವಿಚ್ ಆಪ್ ಆಗಿದೆ.ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಈತನ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸಿತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಕಳೆದ ಕೆಲ ಸಮಯಗಳ ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು.ಇದೀಗ ಇವರ ಬೈಕ್ ಮತ್ತು ಮೊಬೈಲ್ ಪೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?