ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎನ್ನಲಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಶಂಕೆಯ ಕುರಿತು ಅಭಿಪ್ರಾಯಗಳು ಕೇಳಿ ಬಂದಿದೆ.

ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪೋಲಿಸ್ ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆ ಎನ್ನಲಾಗಿದ್ದು, ಆದರೆ ನಿಜಾಂಶವೇನು ಎನ್ನುವುದು ಮರಣೋತ್ತರ ‌ಪರೀಕ್ಷೆಯ ಬಳಿಕ ತಿಳಿದುಬರಬೇಕಾಗಿದೆ.

ಈತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ‌ಕೇಳಿ ಬಂದಿದ್ದು, ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದುಕೊಂಡು ವಂಚಿಸಿದ್ದ ಎಂದು ಯುವಕ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಈ‌ ಕುರಿತು ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೋಲೀಸರ ಬಳಿ ಹೇಳಿಕೊಂಡಿದ್ದು, ಆದರೆ ಕಳೆದ ಮೂರು‌ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿತ್ತು.
ಆದರೆ ಇದೀಗ ಆತನ ಮೃತದೇಹ ಸಂಪೂರ್ಣ ‌ಕೊಳೆತ ಸ್ಥಿತಿಯಲ್ಲಿ ಮನೆಯ ಪಕ್ಕದ ಗುಡ್ಡವೊಂದರಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪದ್ಮನಾಭ ಸಾಮಂತ ಜಿಲ್ಲಾ‌ ಕಾಂಗ್ರೇಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಅ ಬಳಿಕ ಆತ ಯಾರ ಸಂಪರ್ಕಕ್ಕೂ ಸಿಗದೆ, ನಾಪತ್ತೆಯಾಗಿದ್ದ.

ಇದೀಗ ಆತನ ಮೃತದೇಹ ಪತ್ತೆಯಾಗಿದೆ. ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ಮುಂದುವರಿದಿದೆ.

News Editor

Learn More →

Leave a Reply

Your email address will not be published. Required fields are marked *