ಡಾ. ಮಂಜುನಾಥ್‌ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ: ಅನುಸೂಯ ಮಂಜುನಾಥ್‌.

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಪೇಕ್ಷೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಂಜುನಾಥ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಧುಮುಕಿದ್ದಾರೆ ಎಂದು ಡಾ.ಮಂಜುನಾಥ್ ಅವರ ಪತ್ನಿ ಅನುಸೂಯ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಅವರಿಗೆ ಮತ ನೀಡುವ ಮೂಲಕ ಶಕ್ತಿ ತುಂಬಿದರೆ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ತಮ್ಮ ಪತಿ ಗೆಲ್ಲುವ ವಿಶ್ವಾಸವಿದೆ ಎಂದ ಅವರು, ಸ್ಪರ್ಧೆಯ ಬಗ್ಗೆ ಸಂತೋಷವೂ ಇದೆ, ಹಾಗೆಯೇ ನೋವು ಸಹ ಇದೆ.ರಾಜಕೀಯದಲ್ಲಿ ಏಳು ಬೀಳು ಇರುತ್ತದೆ. ಡಾ.ಮಂಜುನಾಥ್ ಬಹಳ ಸೂಕ್ಷ್ಮ ಮನಸ್ಸಿನವರು. ಚುನಾವಣೆಯನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ಆತಂಕವಿದೆ ಎಂದು ತಿಳಿಸಿದ್ದಾರೆ.

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಮೊದಲು ಹಣ ಪಾವತಿ ನಂತರ ಎನ್ನುವ ಘೋಷವಾಕ್ಯ ಜಾರಿಗೊಳಿಸಿರುವ ಅವರು, ಆಸ್ಪತ್ರೆ ಆಡಳಿತ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದಾರೆ. ಇನ್ನೂ, ಡಾ.ಮಂಜುನಾಥ್ ಅವರ ಪರವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿಭಿನ್ನವಾಗಿ ಪ್ರಚಾರ ಮಾಡುತ್ತೇನೆ. ಈಗಿನ ಚುನಾವಣೆಯ ಪ್ರಚಾರ ಶೈಲಿ ಬದಲಾಗಿದೆ. ಅದಕ್ಕೆ ತಕ್ಕಂತೆ ಪ್ರಚಾರ ಕಾರ್ಯ ನಡೆಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಮಂಜುನಾಥ್ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?