ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆ ನಡುವಲ್ಲೇ ಎಐಸಿಸಿ ಈ ನಿರ್ಧಾರ ಪ್ರಕಟಿಸಿದೆ. ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದಿದ್ದು ಅವರದೇ ಊರಿನವರು ಮತ್ತು ಸಂಬಂಧಿಕರೂ ಆದ ಕಿಶನ್ ಹೆಗ್ಡೆ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದುಕೊಂಡಿದ್ದು ಬಿಜೆಪಿ ಪಾಲಿಗೆ ಇಡೀ ಜಿಲ್ಲೆ ಭದ್ರಕೋಟೆಯಂತಿದೆ. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಶಾಸಕರೇ ಗೆಲ್ಲದೇ ಇರುವುದರಿಂದ ಪಕ್ಷದಲ್ಲಿ ಕಾರ್ಯಕರ್ತರ ಬಲವೇ ಕುಗ್ಗಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿ ಇರುವುದರಿಂದ ಕಾಂಗ್ರೆಸನ್ನು ಮತ್ತೆ ಅಧಿಕಾರದತ್ತ ಸಾಗಿಸಲು ಅವಕಾಶವೂ ಆಗಲಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?