ಮೊಬೈಲ್ ನೋಡುತ್ತ ನಡೆದ ಬಾಲಕ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ.

ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ.
ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *