ಬಿಜೆಪಿಗೆ ಬೆಂಬಲ ಎಂದ ಸುಮಲತಾ ಅಂಬರೀಷ್

ಮಂಡ್ಯ ಲೋಕಸಭಾ ಕ್ಷೇತ್ರದ ಜಿದ್ದಾಜಿದ್ದಿಯಲ್ಲಿ ಇಂದು ಸುಮಲತಾ ಸಭೆಯಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ ಅಂಬರೀಷ್. ಮಂಡ್ಯ ಬಿಟ್ಟು ನಾನು ಎಲ್ಲೂ ಹೋಗಲ್ಲ. ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದ ಸುಮಲತಾ ಅಂಬರೀಷ್
ಈ ಬಾರಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆ ನನ್ನ ಬೆಂಬಲ. ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಯಾಗಲಿದ್ದೇನೆ ಎಂದ ಸುಮಲತಾ ಅಂಬರೀಷ್
ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್​ಎಸ್​ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್​ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.

2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?