ಹೆರಿಗೆ ನಂತರ ರಕ್ತ ಸ್ರಾವ ಮೃತ್ಯು : ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರಿಂದ ಆರೋಪ.

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ.

ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗಾಗಿ ಗಾಯತ್ರಿಯವರು ಎ 03 ರಂದು ದಾಖಲಾಗಿದ್ದರು ಎ04 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗುವೊಂದಿದ್ದು ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ. ಈ ಕುರಿತು ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!