ಜೆಪಿ ನಡ್ಡಾ ಪತ್ನಿ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು

ವಾಹನವು ಅಲಿಗಢ, ಲಖಿಂಪುರ ಖೇರಿ, ಬರೇಲಿ, ಸೀತಾಪುರ್ ಮತ್ತು ಲಖನೌ ಮೂಲಕ ವಾರಾಣಸಿ ತಲುಪಿತು. ಆರೋಪಿಗಳು ಫಾರ್ಚೂನರ್ ಅನ್ನು ನಾಗಾಲ್ಯಾಂಡ್‌ಗೆ ಕಳುಹಿಸಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!