ಉಳ್ಳಾಲ: ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕದ್ದಿದ್ದ ಕಳ್ಳ ಆಸ್ಪತ್ರೆಗೆ ದಾಖಲು

ಮಂಗಳೂರು: ಕೊಂಡಾಣ ಕ್ಷೇತ್ರ ಸುದ್ದಿಯಾಗಿದ್ದು, ಯುವಕನೊಬ್ಬ ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾಗಳನ್ನೇ ಕದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ಈ ಕೃತ್ಯ ಮಾಡಿದ್ದಾಗಿ ಹೇಳಿರುವ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಎ.4ರಂದು ಕ್ಷೇತ್ರದಲ್ಲಿನ 6 ಸಿಸಿ ಕ್ಯಾಮೆರಾಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್‌ ಅವರು ಉಳ್ಳಾಲ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಕ್ಷೇತ್ರದ ಕಚೇರಿಯಲ್ಲಿದ್ದ ಡಿವಿಆರ್ ಮೂಲಕ ಕಳ್ಳ ಯಾರು ಎಂದು ಪತ್ತೆ ಹಚ್ಚಿದ್ದಾರೆ.

ಕೊಂಡಾಣದ ಬೀರಿ ನಿವಾಸಿ ಶುಭಾಶ್‌ಚಂದ್ರ ಎಂಬಾತ ಈ ಕಳ್ಳತನ ಮಾಡಿರುವುದು ಡಿವಿಆರ್ ಮೂಲಕ ಗೊತ್ತಾಗಿದೆ. ಆರೋಪಿಯನ್ನು ಬಂಧಿಸಿ ಆತನಿಂದ ಸಿಸಿ ಕ್ಯಾಮೆರಾಗಗಳನ್ನು ವಶಕ್ಕೆ ಪಡೆಯಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!