ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ.

ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ

.

News Editor

Learn More →

Leave a Reply

Your email address will not be published. Required fields are marked *