ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ. 

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ದಿನಾಂಕವನ್ನು ನಿಗದಿಪಡಿಸಿದೆ. ಶಿಕ್ಷೆ ಪ್ರಮಾಣವನ್ನು ಮುಂದಿನ ದಿನಾಂಕದಲ್ಲಿ ಪ್ರಕಟಿಸುವುದಾಗಿ ಆದೇಶ ಹೊರಡಿಸಿದೆ.

ದಿನಾಂಕ 6.08.2015 ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಅಕ್ರ 200/2015 ರ ಕಲಂ:120(B),341, 324, 307, 302,201,34 ರಂತೆ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸಿ, ನಾಲ್ಕು ಜನ ಆರೋಪಿಗಳಾದ ಅನಿಶ್‌, ಅಭಿಜಿತ್‌, ಕಿರಣ್‌, ವಿಜಿತ್‌ ಎಂಬವರ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು sc 50/2017 ಮತ್ತು sc 175/2017 ರ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯನ್ನು ವಿಧಿಸಿದ್ದು, ಶಿಕ್ಷೆ ಪ್ರಮಾಣವನ್ನು ಮುಂದಿನ ದಿನಾಂಕದಲ್ಲಿ ಪ್ರಕಟಿಸುವುದಾಗಿ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದ ಬೆಳ್ಳಿಯಪ್ಪ ರವರು ತನಿಖೆ ನಡೆಸಿದ್ದು, ಸರ್ಕಾರಿ ಅಭಿಯೋಜಕರಾದ ರಾಜು ಪೂಜಾರಿ, ಶೇಖರ್ ಶೆಟ್ಟಿ ರವರುಗಳು ಸರ್ಕಾರದ ಪರವಾಗಿ ವಾದವನ್ನು ಮಂಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *