ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಓರ್ವ ಮಹಿಳೆ ಮೃತ್ಯು : ಇಬ್ಬರ ಸ್ಥಿತಿ ಗಂಭೀರ.

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ.

ಮುಂಬಯಿ ಯಿಂದ ಕೇರಳ ರಾಜ್ಯದ ಮಾಯಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ.  

ಅಪಘಾತದಲ್ಲಿ ಮೃತಪಟ್ಟ ಮಹಿಳೆ ಸಮೀರಾ (45) ಎಂದು ಗುರುತಿಸಲಾಗಿದೆ. ಹಾಗೂ ಗಂಭೀರ ಗಾಯಗೊಂಡ ಮೋನವರ್ ಟಿ. ಪಿ. (49) ಮತ್ತು ಪುತ್ರ ಸುಹೇಲ್ (19) ಇವರನ್ನು ಮಣಿಪಾಲ ಕೆ ಎಂ ಸಿ ಗೆ ಸಾಗಿಸಲಾಗಿದೆ.

ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ ಸಂಪೂರ್ಣ ನುಚ್ಚು ನೂರಾಗಿರುವ ಇನ್ನೋವಾ ಕಾರಿನಲ್ಲಿದ್ದ ಮೂವರ ಪೈಕಿ ಓರ್ವ ಮಹಿಳೆ ಮೃತಪಟ್ಟಿರುತ್ತಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!