ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್‌ ವಂದೇ ಭಾರತ್​ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.

ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್​ಗಳನ್ನು ಉದ್ಘಾಟನೆ ಮಾಡಿದ್ದಾರೆ. ಈ 8 ಟ್ರೈನ್​ಗಳ ಪೈಕಿ ನಮ್ಮ ರಾಜ್ಯಕ್ಕೆ ಎರಡು ಟ್ರೈನ್​ಗಳನ್ನು ನೀಡಲಾಗಿದೆ. ಮಂಗಳೂರು-ಮಡಗಾಂವ್‌ ವಂದೇ ಭಾರತ್ ರೈಲು ಹಾಗೂ ಕೊಯಮತ್ತೂರು-ಬೆಂಗಳೂರು ವಂದೇ ಭಾರತ್​ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ಸಿಕ್ಕಿದೆ.

ಅಂತಾರಾಜ್ಯಗಳ ನಡುವೆ ಸಂಚರಿಸುವ ನಾಲ್ಕನೇ ವಂದೇ ಭಾರತ್‌ ರೈಲು ಇದಾಗಿದೆ. ಇನ್ನು ಮಂಗಳೂರು ಮಡಗಾಂವ್ ರೈಲು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟಿ ಸಂಜೆ 4.40ಕ್ಕೆ ಮಡ್ಗಾಂವ್‌ ತಲುಪಲಿದೆ.ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಟ ರೈಲು 11.30ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರು ತಲುಪಿದೆ.

ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಸಂತಸ ಹಂಚಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಂಟೆಗೆ 160 ಕಿ.ಮೀ ವೇಗದಲ್ಲಿ ವಂದೇ ಭಾರತ್ ರೈಲು ಸಂಚರಿಸುತ್ತೆ. ಮಂಗಳವಾರ ಹೊರತುಪಡಿಸಿ ವಾರದ ಆರು ದಿನವೂ ಸಂಚಾರ ಮಾಡಲಿದೆ. ಬೆ.8.30ಕ್ಕೆ ಮಂಗಳೂರಿನಿಂದ ಆರಂಭಿಸಿ ಮಧ್ಯಾಹ್ನ 1.15ಕ್ಕೆ ಗೋವಾದ ಮಡಗಾಂವ್ ತಲುಪಲಿದೆ. ಮತ್ತೆ ಸಂಜೆ ಮಡಗಾಂವ್ ನಿಂದ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರು ರೀಚ್ ಆಗುತ್ತೆ. ಒಂದು ದಿನದ ಗೋವಾ ಪ್ರಯಾಣಕ್ಕೆ ಇದು ನೆರವಾಗಲಿದೆ.

ಉಡುಪಿ ಮತ್ತು ಕಾರವಾರದಲ್ಲಿ ಮಾತ್ರ ಎರಡು ಕಡೆ ನಿಲುಗಡೆ ಇರಲಿದೆ. ಎಂಟು ಬೋಗಿಗಳ ಹವಾನಿಯಂತ್ರಿತ ವ್ಯವಸ್ಥೆಯನ್ನು ವಂದೇ ಭಾರತ್ ರೈಲು ಹೊಂದಿದೆ. ಏರ್ ಲೈನ್ ಮಾದರಿ ಸೀಟುಗಳ ಜೊತೆಗೆ ಎಕ್ಸಿಕ್ಯುಟಿವ್ ಚೇರ್ ಗಳ ವ್ಯವಸ್ಥೆ ಇದೆ. ಆನ್ ಬೋರ್ಡ್ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ‌ ಇದೆ. ಆನ್‌ಬೋರ್ಡ್ ವೈ-ಫೈ ಮತ್ತು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಔಟ್‌ಲೆಟ್‌ಗಳು ಮತ್ತು ರೀಡಿಂಗ್ ಲೈಟ್‌ಗಳ ಸೌಲಭ್ಯ ಇದೆ. ಸ್ವಯಂಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧರಿತ ವಾಶ್ ಬೇಸಿನ್ ಇದೆ ಎಂದು ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *