ಬೆಂಗಳೂರು: ಡೆಲಿವರಿ ಬಾಯ್ ಕೊಲೆ ಪ್ರಕರಣ : ಐವರು ಸ್ನೇಹಿತರ ಬಂಧನ.

ಬೆಂಗಳೂರು: ಹಲಸೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸತೀಶ್ ಕುಮಾರ್ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಾಜಿನಗರದ ಸತೀಶ್ ಕುಮಾರ್, ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 19ರಂದು ರಾತ್ರಿ ಇವರನ್ನು ಕೊಲೆ ಮಾಡಲಾಗಿತ್ತು. ಆರೋಪಿಗಳಾದ ದೊಮ್ಮಲೂರಿನ ಎಸ್. ಸಂತೋಷ್ (36), ಇಂದಿರಾನಗರದ ಎಂ. ಪವನ್ ಕುಮಾರ್ (26), ತಿಪ್ಪಸಂದ್ರದ ರಂಜಿತ್ ಕುಮಾರ್ (33), ದೊಮ್ಮಲೂರು ಲೇಔಟ್‌ನ ಜೆ. ವಿನೋದ್ ಮ್ಯಾಥ್ಯೂ (35) ಹಾಗೂ ರಂಗನಾಥ್‌ನನ್ನು (41) ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸತೀಶ್ ಕುಮಾರ್ ಹಾಗೂ ಆರೋಪಿಗಳು, ಹಲವು ವರ್ಷಗಳ ಸ್ನೇಹಿತರು. ಎಲ್ಲರೂ ದೊಮ್ಮಲೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಮದ್ಯದ ಪಾರ್ಟಿ ಮಾಡಲೆಂದು, ಸಮೀಪದ ಬಿಡಿಎ ಪಾರ್ಕ್‌ಗೆ ತೆರಳಿದ್ದರು. ಅಲ್ಲಿಯೇ ಎಲ್ಲರೂ ಮದ್ಯ ಕುಡಿದಿದ್ದರು.

ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳ ಶುರುವಾಗಿತ್ತು. ಇದೇ ಸಂದರ್ಭದಲ್ಲಿ ಆರೋಪಿಗಳು, ಸತೀಶ್‌ ಕುಮಾರ್ ಮೇಲೆ ಹಲ್ಲೆ ಮಾಡಿದ್ದರು. ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿದ್ದರು. ತೀವ್ರ ರಕ್ತಸ್ರಾವದಿಂದ ಸತೀಶ್ ಮೃತಪಟ್ಟಿದ್ದರು. ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿಗಳನ್ನು ಇತ್ತೀಚೆಗೆ ಸೆರೆ ಹಿಡಿಯಲಾಗಿದೆ ಎಂದು ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?