ನಿಷೇಧಿತ MDMA ಮಾದಕ ವಸ್ತು ಮಾರಾಟ: ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿ ಮಹಮ್ಮದ್ ರಮೀಜ್ ಅಲಿಯಾಸ್ ಲೆಮೇನ್ ಟಿ ರಮೀಜ್( 33 ) ಎಂಬಾತನಾಗಿದ್ದು ಉಳ್ಳಾಲ ಬಸ್ತಿ ಪಡ್ಪು ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಅಕ್ರಮವಾಗಿ MDMA ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ.

5 ಲಕ್ಷ ರೂ,. ಮೌಲ್ಯದ 100 ಗ್ರಾಂ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ,ಮೊಬೈಲ್ ಫೋನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 5,11,000 ರೂ. ಎಂದು ಅಂದಾಜಿಸಲಾಗಿದೆ.

ಈತನ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?