
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ನಡೆದಿದೆ.

ಸಾವನ್ನಪ್ಪಿದವರು ಯತೀಶ್(40) ಎಂದು ಗುರುತಿಸಲಾಗಿದೆ.
ಅವರು ಸ್ಕೂಟರ್ನಲ್ಲಿ ಅಪರಾಹ್ನ 3.10ರ ಸುಮಾರಿಗೆ ಕೂಳೂರಿನಿಂದ ಕೊಟ್ಟಾರಚೌಕಿ ಕಡೆಗೆ ಬರುತ್ತಿದ್ದಾಗ ಕೋಡಿಕಲ್ ಕ್ರಾಸ್ ಬಳಿ ಸ್ವಲ್ಪ ಮುಂದೆ ಕೂಳೂರು ಕಡೆಯಿಂದ ಕೊಟ್ಟಾರ ಚೌಕಿ ಕಡೆಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ರಸ್ತೆಗೆ ಬಿದ್ದ ಅವರ ಮೇಲೆಯೇ ಲಾರಿಯ ಚಕ್ರ ಹಾದು ಹೋಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
