ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.

ಭಗವಾನ್ ರಾಮನ (god ram) ಚಿತ್ರಗಳನ್ನು ಹೊಂದಿರುವ ಪ್ಲೇಟ್‌ಗಳಲ್ಲಿ (plate) ನಾನ್‌ವೆಜ್‌ ಬಿರಿಯಾನಿ (biriyani) ಬಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social) ವೈರಲ್ (Viral News) ಆಗಿದೆ. ಈ ಘಟನೆ ಉತ್ತರ ದೆಹಲಿಯ (north delhi) ಜಹಾಂಗೀರ್‌ಪುರಿಯಲ್ಲಿರುವ (jahangirpuri) ಬಿರಿಯಾನಿ ಜಾಯಿಂಟ್‌ನಲ್ಲಿ ಭಾನುವಾರ ನಡೆದಿದೆ.

ವಿಡಿಯೋದಲ್ಲಿ ಭಗವಾನ್ ರಾಮನ ಚಿತ್ರಗಳನ್ನು ಒಳಗೊಂಡ ಪ್ಲೇಟ್‌ ಗಳಲ್ಲಿ ಬಿರಿಯಾನಿ ನೀಡುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ಬಿರಿಯಾನಿ ಅಂಗಡಿಯ ಬಳಿ ಜನರ ಗುಂಪಾಗಿ ನಿಂತು ಬಳಕೆ ಮಾಡಿ ಬಿಸಾಡುವ ಪ್ಲೇಟ್ ಗಳಲ್ಲಿ ಬಿರಿಯಾನಿ ತಿನ್ನುತ್ತಿದ್ದರು. ಅಂಗಡಿ ಮಾಲೀಕನ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ತೆರಳಿದ ಪೊಲೀಸರು ರಾಮನ ಚಿತ್ರವಿದ್ದ ಪ್ಲೇಟ್‌ಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕನನ್ನು ಬಂಧಿಸಿದರು.

ರಾಮನ ಚಿತ್ರವಿರುವ ಪ್ಲೇಟ್ ನಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿರುವ ಮಾಹಿತಿ ತಿಳಿದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಮತ್ತು ಬಜರಂಗದಳದ ಸದಸ್ಯರು ಸೇರಿದ್ದು ಅಂಗಡಿಯ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಆ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ವಿರೋಧಿಸಿ ಪೊಲೀಸರಿಗೆ ದೂರು ನೀಡಿದರು. ಅಂಗಡಿಯಲ್ಲಿ ಬಿರಿಯಾನಿ ಮಾರುವವರ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪೇಪರ್ ಪ್ಲೇಟ್‌ಗಳ ಬಂಡಲ್‌ ನಲ್ಲಿ ಒಂದೆರಡು ಪ್ಲೇಟ್‌ಗಳು ಮಾತ್ರ ಭಗವಾನ್ ರಾಮನ ಫೋಟೋಗಳನ್ನು ಹೊಂದಿದ್ದವು. ಪ್ರಸ್ತುತ, ಜಹಾಂಗೀರ್ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಅಂಗಡಿ ಮಾಲೀಕರ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಇದನ್ನು ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಇದನ್ನು ಮಾಡಲಾಗಿದೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ದೆಹಲಿಯ ಜನರು ಬೀದಿ ಬದಿಯ ಆಹಾರವನ್ನು ಹೆಚ್ಚಾಗಿ ಸೇವಿಸುತ್ತಾರೆ. ಹಳೆಯ ದೆಹಲಿಯಲ್ಲಿಯೂ ಆಹಾರದ ರುಚಿ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಈ ಭಾಗದಲ್ಲಿ ಬಿರಿಯಾನಿ ಕೂಡ ಅನೇಕರು ಇಷ್ಟಪಡುತ್ತಾರೆ. ಆದರೆ ಆಹಾರ ಮಾರಾಟಕ್ಕಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಸರಿಯಲ್ಲ ಎಂದು ನಗರದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!