ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿ 

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ.

ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಮನೆಯ ಮಾಲಕ ವಿದೇಶದಲ್ಲಿದ್ದು, ಮನೆ ಬೆಂಕಿ ಕಾಣಿಸಿಕೊಳ್ಳುವ ಸಂದರ್ಭ ಅವರ ಪತ್ನಿ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ಈ ಸಂದರ್ಭ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ, ಅದು ಅಸಾಧ್ಯವಾದಾಗ ಅಗ್ನಿ ಶಾಮಕ ದಳವನ್ನು ಸ್ಥಳಕ್ಕೆ ಕರೆಸಿ ಬೆಂಕಿಯನ್ನು ನಂದಿಸಲಾಯಿತು.

ಆಕಸ್ಮಿಕ ಬೆಂಕಿಗೆ ವಿದ್ಯುತ್ ಶಾರ್ಟ್ ಸಕ್ಯೂಟ್ ಕಾರಣವೆನ್ನಲಾಗಿದೆ. ಮನೆಯೊಳಗಿದ್ದ ಫ್ರಿಡ್ಜ್ ವಾಷಿಂಗ್ ಮೆಷಿನ್, ಪೀಠೋಪಕರಣಗಳ, ಬಟ್ಟೆಬರೆ, ಹಾಸಿಗೆ ಸಹಿತ ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ತಿಳಿಸಿದ್ದಾರೆ. ಕೆಲ ವರ್ಷಗಳ ಹಿಂದೆಯಷ್ಟೇ ಈ ಮನೆಯನ್ನು ನಿರ್ಮಿಸಲಾಗಿತ್ತು ಎಂದು ತಿಳಿದುಬಂದಿದೆ.

News Editor

Learn More →

Leave a Reply

Your email address will not be published. Required fields are marked *