ಉಡುಪಿ ; ಸಿಟಿ ಬಸ್ ನಿಲ್ದಾಣದ ಬಳಿ ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು.

ಉಡುಪಿ : ರಾಜ್ಯದಂತ ಬಿಸಿಲಿನ ತಾಪ ಹೆಚ್ಚಾಗಿದ್ದು ಜನರು ಮನೆಯಿಂದ ಹೊರಬರಲು ಭಯಬೀತರಾಗುವ ಪರಿಸ್ಥಿತಿ ಉಂಟಾಗಿದೆ.ಇದೀಗ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯಲ್ಲಿ ಬಿಸಿಲ ತಾಪಮಾನ ಹೆಚ್ಚಾಗಿದ್ದು ಬಸ್ ಸ್ಟಾಂಡ್ ಬಳಿ ಇದ್ದ ಬದಿಯಪ್ಪ ವಿಪರೀತ ಸೆಖೆಯಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಪುಟ್ಟ ವಯಸ್ಕರು, ಮಕ್ಕಳು ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರಬಾರದೆಂದು ಸೂಚನೆ ನೀಡಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಉಷ್ಣ ಮಾರುತದ ಆರೆಂಜ್ ಅಲರ್ಟ್​ ಘೋಷಿಸಿದೆ.

News Editor

Learn More →

Leave a Reply

Your email address will not be published. Required fields are marked *