ಬೆಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ KAS ಅಧಿಕಾರಿ ಪತ್ನಿಯ ಮೃತದೇಹ ಪತ್ತೆ.

ಬೆಂಗಳೂರು : ಬೆಂಗಳೂರಲ್ಲಿ ಕೆಎ​ಎಸ್ ಅಧಿಕಾರಿಯ ಪತ್ನಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ

ಹೈಕೋರ್ಟ್‌ ವಕೀಲೆ ಚೈತ್ರಾ ಎಂದು ತಿಳಿದುಬಂದಿದ್ದು ವಕೀಲೆಯ ಪತಿ ಕೆಎಎಸ್‌ ಅಧಿಕಾರಿ ಆಗಿದ್ದಾರೆ.ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು ಶಿವಕುಮಾರ್‌ ಮನೆಗೆ ವಾಪಸ್‌ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದು 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆ ಆಗಿದ್ದರು ಈ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ.

ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ,ಹೈಕೋರ್ಟ್‌ ವಕೀಲರಾಗಿರುವುದರಿಂದ ಯಾವುದಾದರೂ ಪ್ರಕರಣದಲ್ಲಿ ಯಾರಾದರೂ ಬೆದರಿಕೆ ಹಾಕಿದ್ದರಾ ಅಥವಾ ಕುಟುಂಬದಲ್ಲೇ ಏನಾದರೂ ಕಲಹ ಇತ್ತಾಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ. ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!