ಉಡುಪಿ: ಮನೆಗೆ ನುಗ್ಗಿ ನಗ-ನಗದು ಕಳವು.

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ನಡೆದಿದೆ.

ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು ಮಡಿಕೇರಿ, ಮೈಸೂರು ಕಡೆ ಪ್ರವಾಸ ಹೋಗಿದ್ದರು. ಮೇ 11ರಂದು ಮೈಸೂರಿನಲ್ಲಿದ್ದಾಗ ಅವರ ಸಂಬಂಧಿ ಅಭಿಷೇಕ್ ಕರೆ ಮಾಡಿ ಮನೆಯ ಮೇಲಿನ ಅಂತಸ್ತಿನ ಬಾಗಿಲಿನ ಚಿಲಕವನ್ನು ಹೊರಗಡೆಯಿಂದ ಯಾರೋ ಕಳ್ಳರು ತೆಗೆದು ಕಳ್ಳತನ ಮಾಡಿದ್ದಾರೆ ಎಂದು ತಿಳಿಸಿದ್ದರು.

ಸುದ್ದಿ ತಿಳಿದು ಪ್ರಭಾವತಿ ಮೈಸೂರಿನಿಂದ ಬಂದು ನೋಡಿದಾಗ ಬೆಡ್ ರೂಮ್‌ನಲ್ಲಿನ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, 1,74,200 ರೂ. ಮೌಲ್ಯದ ಚಿನ್ನ ಹಾಗೂ 3000 ರೂ. ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದರು.ಈ ಬಗ್ಗೆ ಪ್ರಭಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?