ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷ; ಲಕ್ಷಾಂತರ ರೂ. ವಂಚನೆ.

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದ ಶಂಕರಪುರದಲ್ಲಿ ನಡೆದಿದೆ.

ವಂಚನೆಗೊಳಗಾದ ಮಹಿಳೆ ಜೆನಿಫರ್ ಎಂದು ಗುರುತಿಸಲಾಗಿದೆ.

ಶಂಕರಪುರದ ಜೆನಿಫರ್ ಅವರ ಮೊಬೈಲ್‌ಗೆ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಲಿಂಕ್‌ವೊಂದನ್ನು ಕಳಿಸಿ ಟೆಲಿಗ್ರಾಮ್ ಆ್ಯಫ್‌ನಲ್ಲಿರುವ ಓಯಸಿಸ್‌ ಫೈನಾನ್ಸ್ ಎಂಬ ಗ್ರೂಪ್‌ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಗ್ರೂಪ್‌ಗೆ ಸೇರಿದ್ದರು.

ಟೆಲಿಗ್ರಾಮ್ ಗ್ರೂಪ್‌ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕೆಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್‌ ಖಾತೆಗೆ ಹಣವನ್ನು ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡಿದ್ದರು. ವಿವಿಧ ರೀತಿಯ ಟಾಸ್ಕ್‌ಗಳನ್ನು ಪೂರ್ಣಗೊಳಿಸಿದ ಅನಂತರ 18,375 ರೂ. ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?