
ಚನ್ನರಾಯಪಟ್ಟಣ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು .
ಪಟ್ಟಣದ ನಾಗಸಮುದ್ರ ರಸ್ತೆ ನಿವಾಸಿ ಸಿ.ಎಸ್.ದೀಪಾ(34) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ”ಕೆಲಸಕ್ಕೆ ಹೋಗಲು ಹಿಂಸೆಯಾಗುತ್ತಿದೆ ಎಂದು ಪೋಷಕರ ಬಳಿ ಹೇಳಿಕೊಳ್ಳುತ್ತಿದ್ದರು.
ಕಾಲೇಜಿನಲ್ಲಿ ಆಗುತ್ತಿದ್ದ ಹಿಂಸೆಯಿಂದಲೋ ಅಥವಾ ಮಾನಸಿಕ ಕಿರುಕುಳದಿಂದಲೋ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,” ಎಂದು ಮೃತರ ಸಹೋದರ ಪ್ರೀತಂ ಪಟ್ಟಣ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. , ಕಾಲೇಜಿನಲ್ಲಿ ನಡೆದಿರುವ ಕಿರುಕುಳದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.


