ಬೆಳ್ತಂಗಡಿ: ವ್ಯಕ್ತಿಗೆ ಪಶುವೈದ್ಯನಿಂದ ಹಲ್ಲೆ ವ್ಯಕ್ತಿ ಸಾವು.

ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ನಲ್ಲಿ ಸೋಮವಾರ ನಡೆದಿದೆ.ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಹಲ್ಲೆಗೊಳಗಾಗಿ ಸಾವನ್ನಪ್ಪಿದವರು. ಕೃಷ್ಣ ಅವರು ವಿಪರೀತ ಜ್ವರದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಂದಿದ್ದಾರೆ. ಈ ಸಂದರ್ಭ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್‌ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದೆ. ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ. ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಮೃತ ಕೃಷ್ಣ ಅವರು ಕೊಕ್ಕಡ ಭಾಗದಲ್ಲಿ ರೀಲ್ಸ್ ನಲ್ಲಿ ಹೆಚ್ಚಾಗಿ ಜನಜನಿತರಾಗಿದ್ದರು ಇತ್ತೀಚೆಗೂ ಒಂದೂ ಕನ್ನಡ ಸಿನೆಮಾದ ಡೈಲಾಗ್ ನ್ನ ರೀಲ್ಸ್ ಮಾಡಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?