ಮಂಗಳೂರು: ನಿಷೇಧಿಕ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್.

ಮಂಗಳೂರು: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ ಬಾಗಿಲು ಮನೆ ನಿವಾಸಿ ದಾವೂದು ಪರ್ವೇಜ್(37) ಎಂದು ಗುರುತಿಸಲಾಗಿದೆ.

ನಿಷೇಧಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ ಅಂದಾಜು 15,000 ರೂ. ಮೌಲ್ಯದ ಎಂಡಿಎಂಎ ಹಾಗೂ ಹಾಗೂ 810 ರೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದಂತೆ, ಮಂಗಳೂರು ನಗರ ಉಪ-ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ.ಎನ್.ನಾಯಕ ನೇತೃತ್ವದಲ್ಲಿ ಆಂಟಿ ಡ್ರಗ್ ಟೀಂನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್‍ ಠಾಣಾ ಪಿಎಸ್‍ಐ ಅರುಣ್ ಕುಮಾರ್‍ ಡಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *