ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು ಮಾಹಿತಿ ಆಗಿರುತ್ತದೆ.

ಪತ್ರಿಕಾ ಪ್ರಕಟಣೆ

  ದಿನಾಂಕ : 16-05-2024 ರಂದು ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು ಮಾಹಿತಿ ಆಗಿರುತ್ತದೆ.








     ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗುತ್ತದೆ. ವಿಮೆ ನವೀಕರಣಗೊಳ್ಳದ ಯಾವುದೇ ಇಲಾಖಾ ವಾಹನಗಳನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ.  ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾದ ಇಲಾಖಾ ಹೆದ್ದಾರಿ ಗಸ್ತು ವಾಹನ ನೊಂದಣೆ ಸಂಖ್ಯೆ:  ಕೆಎ-19-ಜಿ-1023 ಇದರ ವಿಮಾ ಅವಧಿಯು ದಿನಾಂಕ: 13-10-2025 ರ ತನಕ ಮತ್ತು ವಾಹನದ ಮಾಲಿನ್ಯ ತಪಾಸಣಾ ಅವಧಿಯು ದಿನಾಂಕ: 08-01-2025 ರ ತನಕ ಚಾಲ್ತಿಯಲ್ಲಿ ಇರುತ್ತದೆ.

  ಈ ವಿಷಯಕ್ಕೆ ಸಂಬಂಧಿಸಿದಂತೆ ಸದರಿ ಸಾರ್ವಜನಿಕ ವ್ಯಕ್ತಿಯು ತನ್ನ ಮೋಟಾರ್ ಬೈಕ್‌ನ ವಾಯುಮಾಲಿನ್ಯ ಪತ್ರವನ್ನು ತೋರ್ಪಡಿಸದೇ ಇರುವುದರಿಂದ ಸದರಿ ವ್ಯಕ್ತಿಯ ಮೇಲೆ ರೂ. 500/- ದಂಡವನ್ನು ವಿಧಿಸಲಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?