ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಅವಾಚ್ಯವಾಗಿ ನಿಂದನೆ ಆರೋಪ

ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್‌ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಶಶಿರಾಜ್‌ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾ ರವರು ಇತರ ಕೆಲವು ಜನರೊಂದಿಗೆ, ದಿನಾಂಕ ಮೇ.18 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆತನನ್ನು ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಶಾಸಕರಾದ ಹರೀಶ್ ಪೂಂಜಾ ರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024 , ಕಲಂ:353, 504 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?