ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ.

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26), ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬೆಜ್ಜಾ ಮನೆ, ಮೂಡಂಬೈಲ್‌ನ ಅಬ್ದುಲ್ ನಿಸಾರ್.ಕೆ(29) ಎಂದು ಗುರುತಿಸಲಾಗಿದೆ.

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ಯಾವುದೋ ದುಷ್ಕೃತ್ಯವನ್ನು ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಆರೋಪಿಗಳಿಂದ ಸಜೀವ ಮದ್ದುಗುಂಡುಗಳು-2, ಮೊಬೈಲ್ ಫೋನುಗಳು-2, ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 7,15,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?