ರಘುಪತಿ ಭಟ್ 24 ಗಂಟೆಯೊಳಗೆ ರಾಜಕೀಯ ನಿವೃತ್ತಿ ಘೋಷಿಸಬೇಕು: ಸುನೀಲ್ ಕುಮಾರ್ ಎಚ್ಚರಿಕೆ.

ಉಡುಪಿ: ‘ರಘುಪತಿ ಭಟ್ 24 ಗಂಟೆಯೊಳಗೆ ರಾಜಕೀಯ ನಿವೃತ್ತಿ ಘೋಷಿಸಬೇಕು, ಇಲ್ಲದಿದ್ದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು, ನಾವು ನಮ್ಮ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ, ನಾವು ಇನ್ನೂ ಅವರ ನಿವೃತ್ತಿ ಘೋಷಣೆಯ ನಿರೀಕ್ಷೆಯಲ್ಲಿದ್ದೇವೆ, ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಅಸಮಾಧಾನ ಇದ್ದರೆ, ಅನ್ಯಾಯ ನಡೆದರೆ ಪಕ್ಷ ತನ್ನ ಚೌಕಟ್ಟಿನೊಳಗೆ ನಿರ್ಧಾರವನ್ನು ಸರಿಪಡಿಸುತ್ತದೆ.” ಎಂದಿದ್ದಾರೆ.

News Editor

Learn More →

Leave a Reply

Your email address will not be published. Required fields are marked *