ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ.
