ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ.

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಗೃಹ ಸಚಿವಲಾಯ ವರದಿಯನ್ನು ಆಧರಿಸಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಾವೇ ಖುದ್ದು ಈ ಬಗ್ಗೆ ಹೇಳಿಕೆ ನೀಡುವಂತೆ ಸಿಎಂ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಶಿವಮೊಗ್ಗ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಅವರು ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದರು. ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜ‌ರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್‌ ನೋಟ್‌ ನಲ್ಲಿ ಉಲ್ಲೇಖಿಸಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?