ಮತದಾನೋತ್ತರ ಸಮೀಕ್ಷೆ: ಎನ್ ಡಿಎ 350, ಇಂಡಿಯಾ ಮೈತ್ರಿಕೂಟಕ್ಕೆ 150 ಸ್ಥಾನ

ಹೊಸದಿಲ್ಲಿ: ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ.

ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.

ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362-392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು 10-20 ಸ್ಥಾನ ಗಳಿಸಲಿದ್ದಾರೆ

ರಿಪಬ್ಲಿಕ್ ಭಾರತ್-ಮ್ಯಾಟ್ರಿಝ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 353-368 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 118-133 ಸ್ಥಾನಕ್ಕಷ್ಟೆ ಸೀಮಿತವಾಗಲಿದೆ. ಇತರರು 43-48 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ

ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 359 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ ಕೇವಲ 154 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಇತರರು 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

ಈ ನಾಲ್ಕು ಸಮೀಕ್ಷೆಗಳ ಸರಾಸರಿ ಆಧಾರದಲ್ಲಿ ಎನ್‌ಡಿಎ 350ಕ್ಕಿಂತ ಹೆಚ್ಚು ಹಾಗೂ ಇಂಡಿಯಾ ಮೈತ್ರಿಕೂಟ 125-150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ʼಪೋಲ್ ಆಫ್ 4 ಎಕ್ಸಿಟ್ ಪೋಲ್ಸ್ʼ ಅಂದಾಜಿಸಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?