ಉಡುಪಿಯಲ್ಲಿಯೊಂದು ಪ್ರಜ್ವಲ್ ರೇವಣ್ಣ ; ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ.

ಉಡುಪಿ, ಜೂನ್.02: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ  ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

News Editor

Learn More →

Leave a Reply

Your email address will not be published. Required fields are marked *